34ºc, Sunny
Tuesday, 18th June, 2019
ಕರ್ನಾಟಕ ಪೊಲೀಸ್ ಇಲಾಖೆ ಎಂದರೆ ಇಡೀ ದೇಶದಲ್ಲಿ ಮಾತ್ರವಲ್ಲ ಇಡೀ ಪ್ರಪಂಚದಲ್ಲೇ ಒಳ್ಳೆಯ ಹೆಸರು ಇದೆ, ಯಾಕಂದ್ರೆ ಕರ್ನಾಟಕ ಪೊಲೀಸ್ ಇಲಾಖೆ ಅತ್ಯಂತ ಕಟ್ಟುನಿಟ್ಟಿನ ಕ್ರಮ ಜರುಗಿಸುವ ಕಾರಣಕ್ಕೆ ಉತ್ತರ ಭಾರತದ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯ ಅತ್ಯಂತ ಶಾಂತಿಯುತವಾಗಿ ಇದೆ. ಹೀಗಿದ್ದರೂ ಆಗಾಗ ಪೊಲೀಸ್ ಇಲಾಖೆಯ ಕೆಲವರು ಮಾಡುವ ತಪ್ಪಿಗೆ ಇಡೀ ರಾಜ್ಯವೇ ತಲೆತಗ್ಗಿಸುವ ಪರಿಸ್ಥಿತಿ ಎದುರಾಗುತ್ತಿದೆ. ಈಗಲೂ ಅಂತಹದ್ದೇ ಗಂಭೀರ ಆರೋಪ ಒಂದು ಕೇಳಿಬಂದಿದ್ದು, ದಲಿತನೆಂಬ ಕಾರಣಕ್ಕೆ ಕಿರುಕುಳ... ಹಿರಿಯ ಅಧಿಕಾರಿಗಳ ವಿರುದ್ಧ ಇನ್ಸ್‌ಪೆಕ್ಟರ್ ಸ್ಫೋಟಕ ಆರೋಪ...
ಹೌದು, ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಇನ್ಸ್‌ಪೆಕ್ಟರ್ ಶ್ರೀನಿವಾಸ್ ಅವರು ಸ್ಫೋಟಕ ಆರೋಪ ಮಾಡಿದ್ದಾರೆ. ಅಷ್ಟಕ್ಕೂ ತಮ್ಮ ವಿರುದ್ಧ ಜಾತಿ ಆಧಾರಿತ ಕಿರುಕುಳ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ ಇನ್ಸ್‌ಪೆಕ್ಟರ್ ಶ್ರೀನಿವಾಸ್ ಅವರು. ಇಬ್ಬರು ಹಿರಿಯ ಅಧಿಕಾರಿಗಳು ತಾನು ದಲಿತ ಎಂಬ ಕಾರಣಕ್ಕೆ ನಿರಂತರವಾಗಿ ತೊಂದರೆ ನೀಡುತ್ತಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಮಾಡಿ ಪೋಸ್ಟ್ ಮಾಡುವ ಮೂಲಕ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ ಇನ್ಸ್‌ಪೆಕ್ಟರ್ ಶ್ರೀನಿವಾಸ್ ಅವರು. ಅಲ್ಲದೇ ತಮ್ಮನ್ನು ಬೇಕು ಬೇಕು ಎಂದು ಟಾರ್ಗೆಟ್ ಮಾಡಿ, ಜಾತಿ ಕಾರಣಕ್ಕೆ ಹೀಗೆಲ್ಲಾ ತಾರತಮ್ಯ ಮಾಡಲಾಗುತ್ತಿದೆ ಎಂಬ ಸ್ಫೋಟಕ ಆರೋಪ ಕೂಡ ಕೇಳಿಬಂದಿದೆ.
ದಕ್ಷ ಅಧಿಕಾರಿಯ ದಿಢೀರ್ ವರ್ಗಾವಣೆ?
ಇನ್ಸ್‌ಪೆಕ್ಟರ್ ಶ್ರೀನಿವಾಸ್ ಅವರು ಡಿಸಿಆರ್‌ಇ ಪಶ್ಚಿಮ ವಿಭಾಗ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು, ಆದರೆ ಇವರನ್ನು ಟಾರ್ಗೆಟ್ ಮಾಡಿದ್ದ ಕೆಲವು ಅಧಿಕಾರಿಗಳು ದಿಢೀರ್ ಉಡುಪಿಯ ಡಿಸಿಆರ್‌ಇ ವಿಭಾಗಕ್ಕೆ ಟ್ರಾನ್ಸ್‌ಫರ್ ಮಾಡಿದ್ದರಂತೆ. ಇದೇ ವಿಚಾರವಾಗಿ ಪಶ್ಚಿಮ ವಿಭಾಗ ಠಾಣೆ ಹಾಲಿ ಇನ್ಸ್‌ಪೆಕ್ಟರ್ ಶ್ರೀನಿವಾಸ್ ಅವರು ವರ್ಗಾವಣೆ ಆದೇಶ ಪ್ರಶ್ನಿಸಿ ಕೆಎಟಿ ಎಂದರೆ ಕರ್ನಾಟಕ ಆಡಳಿತ ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸಿದ್ದರು. ಈ ವಿಚಾರವಾಗಿ ನ್ಯಾಯಾಲಯವು ಹಾಲಿ ಇನ್ಸ್‌ಪೆಕ್ಟರ್ ಶ್ರೀನಿವಾಸ್ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡುವಂತಿಲ್ಲ ಎಂದು ಆದೇಶ ಕೂಡ ನೀಡಿದೆಯಂತೆ.
ಹೀಗಿದ್ದರೂ ನ್ಯಾಯಾಲಯ ಆದೇಶಕ್ಕೂ ಮೊದಲೇ ಇನ್ಸ್‌ಪೆಕ್ಟರ್ ಜಿ.ವಿ. ಅರುಣ್ ಕುಮಾರ್ ಅವರು ಇಲ್ಲಿ ಅಧಿಕಾರ ಸ್ವೀಕರಿಸಿ ಒಂದೇ ಠಾಣೆಯಲ್ಲಿ ಇಬ್ಬರು ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ರೀತಿ ವಾತಾವರಣ ಸೃಷ್ಟಿಸಿದ್ದಾರೆ ಹಿರಿಯ ಅಧಿಕಾರಿಗಳು ಎಂಬ ಆರೋಪ ಮಾಡಲಾಗಿದೆ. ಇದರಿಂದಾಗಿ ಇದೀಗ ಠಾಣೆಗೆ ದೂರು ಕೊಡಲು ಬರುವ ಸಾರ್ಜನಿಕರು ಗೊಂದಲಕ್ಕೆ ಸಿಲುಕಿದ್ದಾರೆ ಎಂಬ ಆಕ್ರೋಶ ಕೂಡ ವ್ಯಕ್ತವಾಗಿದೆ.
ಜನರ ಪರವಾಗಿ ನಿಂತಿದ್ದ ಇನ್ಸ್‌ಪೆಕ್ಟರ್
ಹೀಗಿದ್ದಾಗಲೇ ಇನ್ಸ್‌ಪೆಕ್ಟರ್ ಶ್ರೀನಿವಾಸ್ ಅವರು ಮಾಡಿರುವ ಆರೋಪಗಳಲ್ಲಿ ಯಾವುದೇ ಸತ್ಯಾಸತ್ಯತೆ ಇಲ್ಲ ಎಂದು ಹಿರಿಯ ಅಧಿಕಾರಿ ಕರಿಬಸವನ ಗೌಡ ಹೇಳಿರುವುದು ದೊಡ್ಡ ಚರ್ಚೆಗೆ ಕಾರಣವಾಗಿದೆ. ಇನ್ಸ್‌ಪೆಕ್ಟರ್ ಶ್ರೀನಿವಾಸ್ ಅವರ ಸೇವೆ ಹಿನ್ನೆಲೆ ಗಮನಿಸಿದರೆ, ಅವರು ಕೆಲಸ ನಿರ್ವಹಿಸಿದ ಎಲ್ಲೆಡೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಮುಖ ಪಾತ್ರವನ್ನ ವಹಿಸಿದ್ದಾರೆ. ಅಲ್ಲದೇ ದೀನ ದಲಿತರ ಪರ ಕಾಳಜಿ ತೋರಿಸಿದ್ದ ಅವರು, ಸಮಾಜಘಾತುಕ ಶಕ್ತಿಗಳ ವಿರುದ್ಧ ಕಠಿಣ ಕ್ರಮವನ್ನ ಕೈಗೊಳ್ಳುವ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದಾರೆ. ಹೀಗಾಗಿಯೇ ಜನಪರ ಅಧಿಕಾರಿ ಎಂಬ ಹೆಗ್ಗಳಿಕೆ ಕೂಡ ಅವರಿಗೆ ಇದ್ದು, ಇಂತಹ ದಕ್ಷ ಅಧಿಕಾರಿ ಇನ್ಸ್‌ಪೆಕ್ಟರ್ ಶ್ರೀನಿವಾಸ್ ಅವರಿಗೆ ಈಗ ಜಾತಿ ಹೆಸರಲ್ಲಿ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿರುವುದು ಭಾರಿ ದೊಡ್ಡ ತಲ್ಲಣ ಸೃಷ್ಟಿ ಮಾಡಿದೆ.