Neet Question Paper: ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ್ರೆ 10 ವರ್ಷ ಜೈಲು, ₹10 ಕೋಟಿ ದಂಡ ಫಿಕ್ಸ್?

bengaluru diaries | July 25, 2026 - 11:45 am

ದೇಶದ ಮೂಲೆ ಮೂಲೆಯಲ್ಲಿ ಕೂಡ ಇದೀಗ ನೀಟ್ ಪ್ರಶ್ನೆ ಪತ್ರಿಕೆ ವಿಚಾರ ದೊಡ್ಡ ಸಂಚಲನ ಸೃಷ್ಟಿಸಿದ್ದು, ಈಗ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಯುವ ಸಮೂಹ ಆಗ್ರಹ ಮಾಡುತ್ತಾ ಇದೆ. ಹೀಗಿದ್ದಾಗ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹ ಮಾಡಲಾಗುತ್ತಿದ್ದು, ನೋಡ ನೋಡುತ್ತಲೇ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಯುತ್ತಿದೆ. ಇಂತಹ ಸಮಯದಲ್ಲೇ ದೊಡ್ಡ ತಿರುವು ಕೂಡ ಪಡೆದಿರುವ ಈ ವಿಚಾರ ಕೇಂದ್ರ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ, ಅದರಲ್ಲೂ ಪ್ರಧಾನಿ ಮೋದಿ ಅವರು ಇದೇ ವಿಚಾರವಾಗಿ ಖಡಕ್ ಕ್ರಮಕ್ಕೆ ಮುಂದಾಗಿದ್ದಾರೆ. ಹಾಗಾದ್ರೆ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ್ರೆ 10 ವರ್ಷ ಜೈಲು, ₹10 ಕೋಟಿ ದಂಡ ಫಿಕ್ಸ್?

ನೀಟ್ ಸೇರಿದಂತೆ ದೇಶಾದ್ಯಂತ ವ್ಯಾಪಕ ವಿವಾದಕ್ಕೆ ಕಾರಣವಾಗಿರುವ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಈಗ ಕಠಿಣವಾಗಿ ಹತ್ತಿಕ್ಕಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರಕ್ಕೆ ಇದೀಗ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದಿರುವ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ಸಾರ್ವಜನಿಕ ಪರೀಕ್ಷೆಗಳ ಕಾಯ್ದೆ-2024ಕ್ಕೆ ಕಠಿಣವಾದ ತಿದ್ದುಪಡಿ ತರಲು ಒಪ್ಪಿಗೆ ಸೂಚಿಸಲಾಗಿದೆ. ಸೋಮವಾರ ಸಂಸತ್ತಿನಲ್ಲಿ ಈ ಮಸೂದೆ ಮಂಡನೆ ಆಗುವ ಸಾಧ್ಯತೆಯಿದ್ದು, ತಪ್ಪು ಮಾಡಿದ ಕ್ರಿಮಿಗಳ ಎದೆಯಲ್ಲಿ ಇದೀಗ ನಡುಕ ಶುರುವಾಗಿದೆ.


ರಾಷ್ಟ್ರ ರಾಜಧಾನಿಯಲ್ಲಿ ದೊಡ್ಡ ಹೋರಾಟ

ಅಷ್ಟಕ್ಕೂ ಸ್ಪರ್ಧಾತ್ಮಕ & ಸಾರ್ವಜನಿಕ ಪರೀಕ್ಷೆಗಳ ವಿಶ್ವಾಸಾರ್ಹತೆ ಕಾಪಾಡುವ ಉದ್ದೇಶದಿಂದಲೇ ಕೇಂದ್ರ ಸರ್ಕಾರ ಪರೀಕ್ಷಾ ಅಕ್ರಮಗಳ ವಿರುದ್ಧ ಮತ್ತಷ್ಟು ಕಠಿಣ ಕ್ರಮಕ್ಕೆ ಮುಂದಾಗಿದೆ. ಇತ್ತೀಚಿನ ವರ್ಷಗಳಲ್ಲಿ ವಿವಿಧ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ರಾಷ್ಟ್ರ ರಾಜಧಾನಿ ದೆಹಲಿ ನೆಲದಲ್ಲಿ ದೊಡ್ಡ ಹೋರಾಟ ನಡೆಯುತ್ತಿದ್ದು, ಈಗಿರುವ ಕಾನೂನನ್ನು ಇನ್ನಷ್ಟು ಬಲಪಡಿಸಲು ಕೇಂದ್ರ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ. ಆ ಮೂಲಕ ತಪ್ಪು ಮಾಡಿದವರ ಎದೆಯಲ್ಲಿ ನಡುಕ ಶುರುವಾಗಿದೆ ಈಗ. ಅದರಲ್ಲೂ ತಿದ್ದುಪಡಿ ಮೂಲ ಕಠಿಣ ಶಿಕ್ಷೆ ಹಾಗೂ ಕಠಿಣವಾದ ದಂಡ ವಿಧಿಸಲು ಕೂಡ ಚಿಂತನೆಯ ನಡೆಸಿದೆ ಕೇಂದ್ರ ಸರ್ಕಾರ. ಈ ಬಗ್ಗೆ ಮಾಹಿತಿಗಾಗಿ ಮುಂದೆ ಓದಿ ತಿಳಿಯೋಣ ಬನ್ನಿ...

10 ಕೋಟಿ ರೂಪಾಯಿ ದಂಡ ಫಿಕ್ಸ್?

ಅಂದಹಾಗೆ ಮುಂದಿನ ದಿನಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಅಥವಾ ಅಕ್ರಮದಲ್ಲಿ ಭಾಗಿಯಾದವರಿಗೆ ಅಸ್ತಿತ್ವದಲ್ಲಿರುವ 3 ರಿಂದ 5 ವರ್ಷದ ಜೈಲು ಶಿಕ್ಷೆಯನ್ನು 10 ವರ್ಷಗಳಿಗೆ ಹೆಚ್ಚಿಸಲಾಗಿದೆ. ಹಾಗೆಯೇ, ಗರಿಷ್ಠ ದಂಡದ ಮೊತ್ತವನ್ನು ₹10 ಲಕ್ಷದಿಂದ ಬ್ರಹ್ಮಾಂಡ ಮೊತ್ತವಾದ ₹10 ಕೋಟಿಗೆ ಏರಿಕೆ ಮಾಡಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಮಾಹಿತಿ ಮುಂಚಿತವಾಗಿ ಗೊತ್ತಿದ್ದರೂ ಸಹ ಅದನ್ನು ಮುಚ್ಚಿಟ್ಟುಕೊಂಡು ಮೌನವಾಗಿರುವವರಿಗೆ ₹1 ಕೋಟಿವರೆಗೂ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ಕಲ್ಪಿಸಲಾಗಿದೆ. ಕೃತ್ಯದಲ್ಲಿ ಸಂಘಟಿತ ಅಪರಾಧ ಜಾಲವು ಭಾಗಿಯಾಗಿರುವುದು ಸಾಬೀತಾದರೆ, 5 ರಿಂದ 10 ವರ್ಷ ಕಠಿಣ ಜೈಲು ಶಿಕ್ಷೆಯೊಂದಿಗೆ ಕನಿಷ್ಠ ₹1 ಕೋಟಿ ರೂ. ದಂಡ ವಿಧಿಸಲಾಗುತ್ತದೆ.

ಹಾಗೇ ಇದರ ಜೊತೆಗೆ ಪರೀಕ್ಷಾ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣ ತನಿಖೆ ಹಾಗೂ ವಿಚಾರಣೆಯ ತ್ವರಿತವಾಗಿ ಪೂರ್ಣಗೊಳಿಸಲು Fast Track Courts ಸ್ಥಾಪಿಸಲಾಗುವುದು. ಇದೇ ಕೋರ್ಟ್‌ಗಳು ಕೇವಲ ಮೂರೇ ತಿಂಗಳಲ್ಲಿ ಅಂತಿಮ ತೀರ್ಪು ಪ್ರಕಟಿಸಲಿವೆ. ಈ ಮೂಲಕ ಕಠಿಣ ಕ್ರಮಕ್ಕೆ ಕೇಂದ್ರ ಸರ್ಕಾರ ಮುಂದಾಗಿದ್ದು, ಇನ್ನುಮುಂದೆ ಪ್ರಶ್ನೆಪತ್ರಿಕೆ ಲೀಕ್ ಮಾಡಿ ಕೃತ್ಯ ಎಸಗುವವರಿಗೆ ಕಠಿಣವಾದ ಶಾಸ್ತಿಯೇ ಆಗಲಿದೆ. ದೇಶದ ಯುವಜನತೆ ಹೊಸ ನಿಯಮ ಸ್ವಾಗತಿಸಿದ್ದು, ಆದಷ್ಟು ಬೇಗ ಇದನ್ನು ಜಾರಿಗೆ ತರಲು ಆಗ್ರಹಿಸುತ್ತಿದ್ದಾರೆ.