ಭಾರತೀಯ ಯುವ ಜನತೆ ಇದೀಗ ಜಗತ್ತಿನಾದ್ಯಂತ ಸುದ್ದಿಯಲ್ಲಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಹೋರಾಟದ ಕಾರಣಕ್ಕೆ ಜೆನ್-ಜಿ ಸಮೂಹದ ಬಗ್ಗೆ ಚರ್ಚೆ ಜೋರಾಗಿದೆ. ನೀಟ್ ಪ್ರಶ್ನೆಪತ್ರಿಕೆ ಲೀಕ್ ಪ್ರಕರಣದ ವಿಚಾರವಾಗಿ ಶುರುವಾಗಿದ್ದ ಹೋರಾಟ ಕೊನೆಗೆ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಮೂಲಕ ಕೊನೆಗೂ ಅಂತ್ಯವಾಗಿತ್ತು. ಹೀಗಿದ್ದಾಗ ಪ್ರಧಾನಿ ಮೋದಿ ಅವರು ಇಂದು ಭಾರತದ ಯುವ ಸಮೂಹಕ್ಕೆ ಮಹತ್ವದ ಸಂದೇಶ ರವಾನಿಸಿದ್ದಾರೆ. ಅದರಲ್ಲೂ ಐಐಟಿ ವೇದಿಕೆ ಮೇಲೆ ನಿಂತು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಆ ಮಹತ್ವದ ಸಂದೇಶ ಏನು? ಬನ್ನಿ ತಿಳಿಯೋಣ.
ಅಂದಹಾಗೆ ಯುವ ಸಮೂಹವು ಯಾವುದೇ ವಿಚಾರವನ್ನ ಯೋಚಿಸದೆಯೇ ಒಪ್ಪಿಕೊಳ್ಳುವ ಬದಲಾಗಿ ಅದರ ಬಗ್ಗೆ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಆದರೆ ಬರೀ ಪ್ರಶ್ನೆಗಳನ್ನು ಕೇಳುವುದರಲ್ಲೇ ನಿಲ್ಲದೆ, ಅದಕ್ಕೆ ಪರಿಹಾರ ಕಂಡುಕೊಳ್ಳುವ ಧೈರ್ಯವನ್ನ ಯುವಕರು ಹೊಂದಿರಬೇಕು ಎಂದು ಪ್ರಧಾನಿ ಮೋದಿ ಅವರು ಇಂದು ಹೇಳಿದರು. ಐಐಟಿ ದೆಹಲಿ 57ನೇ ಘಟಿಕೋತ್ಸವ ಸಮಾರಂಭದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳನ್ನ ಉದ್ದೇಶಿಸಿ ಪಿಎಂ ಮೋದಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ಪದವಿಗಳು ಕೇವಲ ಅವರ ಶೈಕ್ಷಣಿಕ ಸಾಧನೆ ಪ್ರತೀಕವಲ್ಲ, ಬದಲಾಗಿ ದೇಶದ ಅಭಿವೃದ್ಧಿಗೆ ತಮ್ಮದೇ ಕೊಡುಗೆ ನೀಡುವ ಜವಾಬ್ದಾರಿಯನ್ನು ಹೊತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ವದ ಸಂದೇಶ ನೀಡಿದ್ದಾರೆ.